ಮತಾಂಧರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಲು ಕ್ಯಾ.ಬ್ರಿಜೇಶ್ ಚೌಟ ಆಗ್ರಹ

mng-30nov-capt chouta
Published on


ಮಂಗಳೂರು : ಹರೇಕಳದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಹರೇಕಳ ಬೂತ್ ಬಿಜೆಪಿ ಅಧ್ಯಕ್ಷ ಶರತ್‌ಕುಮಾರ್ ಗಟ್ಟಿ ಮತ್ತು ಅವರ ಅಜ್ಜಿಯ ಮೇಲೆ ಮತಾಂಧರು ಹಲ್ಲೆ ನಡೆಸಿರುವುದನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರ ಆರೋಗ್ಯದ ಮಾಹಿತಿ ಪಡೆದರು.
ಹಲ್ಲೆಕೋರರ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಲು ಸಂಸದ ಕ್ಯಾ.ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಹಲ್ಲೆ ನಡೆಸಿರುವ ಆರೋಪಿಗಳು ಕೂಡ ಆಸ್ಪತ್ರೆ ದಾಖಲಾಗಿ ಸುಳ್ಳು ಕೇಸು ದಾಖಲಿಸಲು ಪ್ರಯತ್ನಿಸುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುವುದನ್ನು ಕಂಡು ಸುಮ್ಮನಿರುವುದು ಸಾಧ್ಯವಿಲ್ಲ. ಪದೇ ಪದೇ ಇಂತಹ ಘಟನೆಗಳು ನಡೆಯುವುದರಿಂದ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣವಾಗುತ್ತಿದೆ. ಹೀಗೆಯೇ ಮುಂದುವರಿದರೆ ತಕ್ಕ ಉತ್ತರ ನೀಡಲು ಹಿಂದೂ ಸಮಾಜ ಸಿದ್ಧವಾಗಿದೆ ಎಂದು ಎಂಎಲ್‌ಸಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net