

ಮಂಗಳೂರು : ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಂಗಳವಾರ ನಗರದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಶ್ರೀ ಮಂಗಳಾದೇವಿ ದೇವಸ್ಥಾನ, ಉರ್ವ ಶ್ರೀ ಮಹಾಗಣಪತಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಾಸಕರಾದ ವೇದವ್ಯಾಸ ಕಾಮತ್, ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ರಾಜ್‌ಗೋಪಾಲ್ ರೈ , ವಿಜಯ ಕುಮಾರ್ ಶೆಟ್ಟಿ, ಪೂರ್ಣಿಮಾ, ನಂದನ್ ಮಲ್ಯ ಉಪಸ್ಥಿತರಿದ್ದರು.