ದ.ಕ.ಲೋಕಸಭೆ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಕ್ಯಾ.ಗಣೇಶ್ ಕಾರ್ಣಿಕ್

gggggggggggg
Published on



ಮಂಗಳೂರು : ದ.ಕ.ಲೋಕಸಭೆ ಕ್ಷೇತ್ರದ ಪ್ರಭಾರಿಯಾಗಿ ಮಾಜಿ ಎಂಎಲ್‌ಸಿ ಕ್ಯಾ.ಗಣೇಶ್ ಕಾರ್ಣಿಕ್ ಅವರನ್ನು ರಾಜ್ಯ ಬಿಜೆಪಿ ಸಮಿತಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಪ್ರಭಾರಿ ಹುದ್ದೆಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಸಲಾಗಿತ್ತು. ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದ ಕಾರಣ ಈ ಬದಲಾವಣೆ ಮಾಡಲಾಗಿದೆ. ಜಿಲ್ಲಾ ಚುನಾವಣಾ ಸಂಚಾಲಕರಾಗಿ ಹಿರಿಯ ನಾಯಕ ನಿತಿನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ
ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net