ಬೋನ್‌ಗೆ ಬಿದ್ದ ಗಂಡು ಚಿರತೆ

ank news and photos 01.01
ಬೋನ್‌ನಲ್ಲಿ ಸೆರೆಯಾದ ಚಿರತೆ
Published on

ಆನೇಕಲ್: ಕಳೆದೊಂದು ವಾರದಿಂದ ಎಲೆಕ್ಟ್ರಾನಿಕ್‌ಸಿಟಿ ಸುತ್ತಮುತ್ತ ಪ್ರದೇಶಗಳಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಗಂಡು ಚಿರತೆಯೊಂದು ಮಂಗಳವಾರ ತಡರಾತ್ರಿ ಅರಣ್ಯ ಇಲಾಖೆಯ ಬೋನ್‌ನಲ್ಲಿ ಸೆರೆಯಾಗಿದೆ.
ಎಲೆಕ್ಟ್ರಾನಿಕ್ ಸಿಟಿಯ ಹೆಲಿಪ್ಯಾಡ್ ಸಮೀಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟು ಡ್ರೋನ್ ಕ್ಯಾಮರಾ ಮೂಲಕ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸಿದ್ದರು. ಆಹಾರ ಅರಸಿ ಬಂದ ಚಿರತೆ ಬೋನ್‌ನಲ್ಲಿ ಸೆರೆಯಾಗಿದೆ. ವೈದ್ಯರ ತಂಡ ಚಿರತೆಗೆ ಅರವಳಿಕೆ ಮದ್ದು ನೀಡಿ ಬಳಿಕ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರವಾನಿಸಿದ್ದಾರೆ. ಚಿರತೆ ಆರೋಗ್ಯ ತಪಾಸಣೆ ಬಳಿಕ ಸುರಕ್ಷಿತ ಸ್ಥಳಕ್ಕೆ ಬಿಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಜಿಗಣಿ ಕೈಗಾರಿಕಾ ಪ್ರದೇಶ, ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಸಂಚರಿಸಿತ್ತು, ಸಿಸಿ ಟಿವಿ ಕ್ಯಾಮರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸಲಾಗಿತ್ತು. ಗಂಡು ಚಿರತೆ ರಕ್ಷಣೆ ಮಾಡಿ ಬನ್ನೇರುಘಟ್ಟಕ್ಕೆ ತರಲಾಗಿದೆ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಬಳಿಕ ಕಾಡಿಗೆ ಬಿಡಲಾಗುವುದು, ಬನ್ನೇರುಘಟ್ಟ ಅರಣ್ಯಕ್ಕೆ ಬಿಡುವ ಸಾಧ್ಯತೆ ಇದೆ ಎಂದು ಬನ್ನೇರುಘಟ್ಟ ಉದ್ಯಾನದ ವೈದ್ಯಾಧಿಕಾರಿ ಡಾ.ಕಿರಣ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net