

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ತಡೆಬೇಲಿಗೆ ಡಿಕ್ಕಿ ಹೊಡೆದು ಜಖಂಗೊಂಡ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ಶನಿವಾರ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಬಿಳಿಯಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರೂ ಕಾರು ನುಜ್ಜುಗುಜ್ಜಾಗಿದೆ.