ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಯುವಕನ ದಾರುಣ ಸಾವು

Accident
Published on

ಬೆಂಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕನೋರ್ವ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಗರದ ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ರಜತ್ (27) ಮೃತ ದುರ್ದೈವಿ. ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಮುಖ್ಯರಸ್ತೆ ಬದಿಯ ಮರಕ್ಕೆ ಡಿಕ್ಕಿ‌ ಹೊಡೆದಿದೆ. ಇದರ ಪರಿಣಾಮ ಕಾರು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶನಿವಾರ ತಡರಾತ್ರಿ 1.30ರ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಕಿಯಾ ಸೆಲ್ಟೋಸ್ KA 02 MQ0422 ನಂಬರ್​ನ ಕಾರಿನಲ್ಲಿ ಮೃತ ರಜತ್​ ಬಂದಿದ್ದ. ಈತ ವಿಜಯನಗರ ನಿವಾಸಿ.‌ ಕೆ ಸಿ ಜನರಲ್ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಮಲ್ಲೇಶ್ವರಂ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಳಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net