

ಮಂಡ್ಯ: ರಸ್ತೆಯ ಬದಿಯಲ್ಲಿ ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ರಭಸದಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದೆ.
ಶರತ್, ಶಶಾಂಕ್ ಮತ್ತು ಸುದರ್ಶನ್ ಎಂಬ ವಿದ್ಯಾರ್ಥಿಗಳಿಗೆ ಈ ಕಾರು ಡಿಕ್ಕಿ ಹೊಡೆದಿದ್ದು ಅವರಿಗೆ ಗಂಭೀರ ಗಾಯಗಳಾಗಿವೆ. ಮೂವರೂ ಶಾಂತಿ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆಯುತ್ತಿದ್ದಂತೆಯೇ ಕಾರಿನಿಂದ ಇಳಿದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕಾರನ್ನು ಒಬ್ಬ ಪೊಲೀಸ್ ಅಧಿಕಾರಿ ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ಅವರನ್ನು ರಕ್ಷಿಸಲು ದೃಷ್ಟಿಯಿಂದ ಪೊಲೀಸರು ವಿವರಗಳನ್ನು ಮುಚ್ಚಿಡುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.