

ಗಂಗೊಳ್ಳಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೀಜಾಡಿ ಕ್ರಾಸ್ ಬಳಿ ಕಾರು ನಿಯಂತ್ರಣ ತಪ್ಪಿ ಮಿನಿ ಲಾರಿಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವೇಗವಾಗಿ ಬರುತ್ತಿದ್ದ ಕಾರು ಬೀಜಾಡಿ ಕ್ರಾಸ್ ಸಮೀಪ ಹಾಕಿದ ಬ್ಯಾರಿಕೆಡ್ ಕಂಡು ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸರ್ವೀಸ್ ರಸ್ತೆಯಲ್ಲಿ ಬರುತ್ತಿದ್ದ ಮಿನಿ ಲಾರಿಗೆ ಗುದ್ದಿ ಪಲ್ಟಿಯಾಗಿದೆ.