

ಉಡುಪಿ: ಡಿವೈಡರ್ ಡಿಕ್ಕಿ ಹೊಡೆದ ಕಾರೊಂದು ವೇಗದ ರಭಸಕ್ಕೆ ನಿಯಂತ್ರಣ ತಪ್ಪಿ ಬೈಕ್ ಮೇಲೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಟೇಲ್ ಮಣಿಪಾಲ್ ಇನ್ ಬಳಿ ನಡೆದಿದೆ.
ವಿಜಯಪುರದ ನಿವಾಸಿ ಸುನಿಲ್ (24) ಮೃತ ದುರ್ದೈವಿ. ಬಹ್ಮಾವರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಈ ಬಳಿಕ ಪಕ್ಕದ ಸರ್ವಿಸ್ ರಸ್ತೆಯ ಮೇಲೆ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಮತ್ತೊಬ್ಬ ಸವಾರ ಬಾಗಲಕೋಟೆಯ ನಿವಾಸಿ ಮಂಜುನಾಥ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)