ಬೆಂ-ಮೈ ಹೆದ್ದಾರಿ ಉದ್ಘಾಟನೆ ದಿನವೇ ಕಾರು ಪಲ್ಟಿ: ಮೂವರಿಗೆ ಗಾಯ, ಅಪಾಯದಿಂದ ಪಾರು

Car
Published on

ಮದ್ದೂರು: ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ ದಿನವೇ ಶಿಂಷಾ ಸೇತುವೆ ಸಮೀಪ ಕಾರು ಪಲ್ಟಿಯಾಗಿ ಮೂವರಿಗೆ ಗಾಯವಾಗಿದೆ.

ಕಾರು ಪಲ್ಟಿಯಾದರೂ ಅದರಲ್ಲಿ ಪ್ರಯಾಣಿಸುತ್ತಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂವರಿಗೆ ಸಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ಮೈಸೂರಿನವರಾಗಿದ್ದು, ಬೆಂಗಳೂರಿನಿಂದ ಭಾನುವಾರ ಮೈಸೂರಿಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ.

ಗಾಯಗೊಂಡವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net