ಬೆ-ಮೈ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಅಪ್ಪಳಿಸಿದ ಕಾರು: ಆಶ್ಚರ್ಯಕರ ರೀತಿಯಲ್ಲಿ ಪಾರಾದ ಪ್ರಯಾಣಿಕರು

1
Published on

ಮಂಡ್ಯ: ತಾಲೂಕಿನ ಹೊಸಬೂದನೂರು ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾಗಿ ಪ್ರಯಾಣಿಕರು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ.

ಗುರುವಾರ ಅವಘಡ ಸಂಭವಿಸಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಫಾರ್ಚೂನರ್ ಕಾರು ತೀವ್ರ ವೇಗದಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಹೈವೇ ರಸ್ತೆಯಿಂದ ಉಜ್ಜಿಕೊಂಡು ಫೆನ್ಸಿಂಗ್ ಭೇಧಿಸಿಕೊಂಡು ಉರುಳಿ ಸರ್ವಿಸ್ ರಸ್ತೆಗೆ ಅಪ್ಪಳಿಸಿ ಬಿದ್ದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರ್‌ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಬೆಂಗಳೂರು ಮೂಲದ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಈ ವೇಳೆ ಗ್ರಾಮಸ್ಥರು ಬಸ್ಸಿಗಾಗಿ ಕಾಯುತ್ತ ನಿಂತಿದ್ದರೆ ಸಾವು ನೋವುಗಳು ಸಂಭವಿಸುತ್ತಿತ್ತು ಎನ್ನಲಾಗಿದೆ. ಇತ್ತೀಚೆಗೆ ಇದೇ ಸ್ಥಳದಲ್ಲಿ ವೃದ್ಧೆ ಹಾಗೂ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ರಸ್ತೆಕಾಮಗಾರಿ ್ಲಅವೈಜ್ಞಾನಿಕವಾಗಿದ್ದು, ಇದನ್ನು ಸರಿಪಡಿಸಬೇಕೆಂದು ಹಲವು ಬಾರಿ ಮನವಿ ಮಾಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net