

ಬೆಂಗಳೂರು: ಹಾಡಹಗಲೇ ಮದ್ಯಪಾನ ಮಾಡಿ ಅಮಲೇರಿ ವಾಹನ ಚಲಾಯಿಸಿದ ಕುಡುಕರು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಬಳಿ ಈ ಅಪಘಾತ ಸಂಭವಿಸಿದೆ.
ಪಾನಮತ್ತರಾಗಿದ್ದವರು ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದಲ್ಲದೆ, ಗಂಡ-ಹೆಂಡತಿ ಹಾಗೂ ಮಗು ಪ್ರಯಾಣಿಸುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಬೈಕ್ನಲ್ಲಿದ್ದ ಮಹಿಳೆಯ ಕಾಲು ಮುರಿದಿದ್ದು, ಮಗು ಹಾಗೂ ಪತಿ ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ಗೆ ಮಾತ್ರವಲ್ಲದೆ ಅಲ್ಲೇ ಇದ್ದ ಪೊಲೀಸ್ ಚೌಕಿಗೂ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.