ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತದಲ್ಲಿ ಬೈಕ್ ಸವಾರ ಸಾವು

Mandya
Published on

ಶ್ರೀರಂಗಪಟ್ಟಣ: ಬೈಕಿಗೆ ಹಿಂಬದಿಯಿಂದ ಕಾರು ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಯುವತಿಗೆ ಗಂಭೀರ ಗಾಯವಾಗಿದೆ.

ತಾಲೂಕಿನ ಕೋಡಿಶೆಟ್ಟಿಪುರ ಹಾಗೂ ಗಣಂಗೂರು ನಡುವಿನ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ಸಮೀಪ ಮಂಗಳವಾರ ಅಪಘಾತ ಸಂಭವಿಸಿದ್ದು, ಮಂಡ್ಯ ಗಾಂಧಿನಗರದ ಗಾರೆ ಕಾರ್ಮಿಕ ಕುಮಾರ (35) ಮೃತ ಪಟ್ಟಿದ್ದಾರೆ. ಈತ ಮಂಡ್ಯದಿಂದ ಮೈಸೂರಿಗೆ ಗಾರೆ ಕೆಲಸಕ್ಕೆಂದು ಬೈಕಿನಲ್ಲಿ ತೆರಳುತ್ತಿದ್ದರು. ಕಾರಿನೊಳಗಿದ್ದ ಸಲ್ಮಾ ಬಾನು(35) ಎಂಬಾಕೆ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net