ಕಾರು ಅಪಘಾತ ಮಹಿಳೆ ಮೃತ್ಯು, ಮೂವರು ಗಂಭೀರ

Accident Bike
Published on

ಮಂಗಳೂರು: ನಗರ ಹೊರವಲಯದ ಕುಳಾಯಿ ಸಮೀಪ ಬುಧವಾರ ರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ಕೃಷ್ಣಾಪುರ ಚೊಕ್ಕಬೆಟ್ಟುವಿನ ಸದ್ಯ ನಗರದ ಬೋಂದೆಲ್‌ನಲ್ಲಿ ವಾಸಿಸುತ್ತಿರುವ ಸುಹಾನಾ (26) ಮೃತಪಟ್ಟವರು. ಕಾರಿನಲ್ಲಿ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಎಂಬುವರಿದ್ದು, ಅವರಿಗೆ ಗಂಭೀರ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ಈ ಕುಟುಂಬ ನಗರಕ್ಕೆ ಆಗಮಿಸಿ ಆಹಾರ ಪಾರ್ಸೆಲ್ ಮಾಡಿಸಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳುತ್ತಿದ್ದಾಗ ಕುಳಾಯಿ ಬಳಿ ಅಪಘಾತ ಸಂಭವಿಸಿತ್ತು. ಕಾರು ಚಲಾಯಿಸುತ್ತಿದ್ದ ರಾಹಿಲ್ ಶಮೀಮ್‌ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಮತ್ತೊಂದು ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿತ್ತು. ಕಾರಲ್ಲಿದ್ದ ನಾಲ್ಕು ಮಂದಿಗೂ ಗಂಭೀರ ಗಾಯವಾಗಿದ್ದು, ಆ ಪೈಕಿ ಸುಹಾನಾ ತಡ ರಾತ್ರಿಯೇ ಮೃತಪಟ್ಟಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮುಹಮ್ಮದ್ ರಿಯಾಝ್ ನೀಡಿದ ದೂರಿನಂತೆ ಸಂಚಾರ ಉತ್ತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net