ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ; ಸಂಚಾರ ಅಸ್ತವ್ಯಸ್ತ, ಸ್ಥಳಕ್ಕೆ ಪೊಲೀಸರು ದೌಡು

Car Accidetn 31 Dec 19
Published on

ಚಿಕ್ಕಬಳ್ಳಾಪುರ: ನಗರದ ಬಿಬಿ ರಸ್ತೆಯಲ್ಲಿ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸರಣಿ ಅಪಘಾತದ ಹಿನ್ನೆಲೆಯಲ್ಲಿ ಟ್ರಾಫಿಕ್​ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನಾಲ್ಕೂ ಕಾರುಗಳೂ ಬಹುತೇಕ ನುಜ್ಜುಗುಜ್ಜಾಗಿವೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ವೃತ್ತನಿರೀಕ್ಷಕ ಸುದರ್ಶನ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net