ಹೊಸಪೇಟೆ ಮರ್ಸಿಡೆಸ್ ಬೆಂಜ್ ಕಾರು ಅಪಘಾತದ ಬಗ್ಗೆ ಯಾವ ಸಚಿವರು ಏನು ಹೇಳಿದರು?

acident 12 feb 2020
Published on

ಬೆಂಗಳೂರು/ ಕೊಪ್ಪಳ: ಹೊಸಪೇಟೆ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ಮರ್ಸಿಡೆಸ್​ ಬೆಂಜ್​ ಕಾರು ಅಪಘಾತ ಪ್ರಕರಣ ಸಾರ್ವಜನಿಕವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಅಪಘಾತದ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್​. ಅಶೋಕ್​ ಪ್ರತಿಕ್ರಿಯೆ ನೀಡಿದ್ದಾರೆ.

ಕಾರು ಅಪಘಾತದ ಬಗ್ಗೆ ನನಗೆ ಇನ್ನು ಸಂಪೂರ್ಣ ಮಾಹಿತಿ ಇಲ್ಲ. ಪೊಲೀಸರಿಂದ ಸಂಪೂರ್ಣ ಮಾಹಿತಿ ಪಡೆದು ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೊಪ್ಪಳದಲ್ಲಿ ಹೇಳಿದ್ದಾರೆ.

ನನಗೆ ಈಗಷ್ಟೇ ಅಪಘಾತ ಆಗಿರುವ ಮಾಹಿತಿ ಸಿಕ್ಕಿದೆ. ಅದರಲ್ಲಿ ಯಾರು ಇದ್ದರು? ಯಾರು ಕಾರು ಚಾಲನೆ ಮಾಡುತ್ತಿದ್ದರು ಎನ್ನುವ ಮಾಹಿತಿ ಇಲ್ಲ. ಪೊಲೀಸರಿಂದ ಮಾಹಿತಿ ಪಡೆದು ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತೇನೆ ಎಂದು ಗೃಹ ಸಚಿವರು ಜಾರಿಕೊಂಡರು.

ಯಾವುದೇ ಸಂಬಂಧ ಇಲ್ಲ: ಹೊಸಪೇಟೆ ತಾಲೂಕಿನ ಮರಿಯಮ್ಮಹಳ್ಳಿ ಬಳಿ ಸಂಭವಿಸಿದ ಕಾರು ಅಪಘಾತಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಕಂದಾಯ ಸಚಿವ ಆರ್​.ಅಶೋಕ್​ ಹೇಳಿದರು.

ಅಪಘಾತಕ್ಕೆ ಕಾರಣ ನನ್ನ ಪುತ್ರ ಎಂಬ ಸುದ್ದಿ ಎಲ್ಲ ಕಡೆ ಹರಡಿದೆ. ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಇದರಲ್ಲಿ ನನ್ನ ಮಗನ ಪಾತ್ರ ಇಲ್ಲ. ಅಪಘಾತದ ತನಿಖೆ ನಡೆಯುತ್ತಿದೆ. ನಂತರ ನಿಜ ತಿಳಿಯಲಿದೆ ಎಂದು ಅವರು ಹೇಳಿದರು.

ಪೊಲೀಸರು ಹಾಕಿರುವ ಎಫ್ಐಆರ್ ನಲ್ಲಿ ನನ್ನ ಮಗನ ಹೆಸರು ಇಲ್ಲ. ಅಪಘಾತ ನಡೆದಾಗ ಸ್ಥಳದಲ್ಲಿ ಇದ್ದವರು ಪೊಲೀಸರಿಗೆ ಮಾಹಿತಿ ನೀಡಿ ಎಫ್​ಐಆರ್​ ಹಾಕಿಸಿದ್ದಾರೆ. ಅಪಘಾತದಲ್ಲಿ ನನ್ನ ಮಗನಿಗೆ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಂತರ ನಿಜ ತಿಳಿಯಲಿದೆ ಎಂದು ಅವರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net