

ಚನ್ನಪಟ್ಟಣ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಚನ್ನಪಟ್ಟಣ ಹಾಗೂ ಕಬ್ಬಾಳು ಮುಖ್ಯರಸ್ತೆಯ ಅಮ್ಮಳ್ಳಿದೊಡ್ಡಿ ಗ್ರಾಮದ ಬಳಿ ಭಾನುವಾರ ರಾತ್ರಿ ನಡೆದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಮೂಲದ ಮಧು, ದೀಪು ಹಾಗೂ ಅಭಿ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಚಿರು ಎಂಬಾತ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಲ್ವರು ಸ್ನೇಹಿತರು ಕಬ್ಬಾಳು ದೇವಸ್ಥಾನಕ್ಕೆ ತೆರಳಿ ವಾಪಸ್ ಆಗುವಾಗ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಸ್ವಿಪ್ಟ್ ಕಾರು ಬೃಹತ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಒರ್ವ ಗಾಯಗೊಂಡಿದ್ದಾರೆ.
ಪ್ರಸ್ತುತ ಮೃತ ದೇಹಗಳು ಹಾಗೂ ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.