ಭೀಕರ ಕಾರು ಅಪಘಾತ: ಸಾವಿಗೀಡಾದವರ ಸಂಖ್ಯೆ ಮೂರಕ್ಕೆ ಏರಿಕೆ...

Car F
Published on

ವಿಜಯನಗರ: ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮತ್ತೊಬ್ಬರು ಸಾವಿಗೀಡಾಗಿದ್ದು, ಈ ಅಪಘಾತದಲ್ಲಿ ಸತ್ತವರ ಒಟ್ಟು ಸಂಖ್ಯೆ ಮೂರಕ್ಕೇರಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗೊಲ್ಲರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಈ ಅಪಘಾತ ಸಂಭವಿಸಿದೆ. ಮೊದಲಿಗೆ ಅಜ್ಮಲ್ (35), ಸಲ್ಮಾ(30) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ. ಆ ಪೈಕಿ ರಹೀಜ್ (30) ಸಾವಿಗೀಡಾಗಿದ್ದಾರೆ.

ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು. ಇವರೆಲ್ಲ ಕೇರಳದಿಂದ ಮಾರ್ಬಲ್ ಕೆಲಸ ಮುಗಿಸಿ ರಾಜಸ್ಥಾನಕ್ಕೆ ಮರಳುವಾಗ ಮಾರ್ಗಮಧ್ಯೆ ಈ ಅಪಘಾತ ಸಂಭವಿಸಿದೆ. ಅಜಾಗರೂಕತೆಯ ಚಾಲನೆ ಹಾಗೂ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net