

ವಿಜಯನಗರ: ರಾಜ್ಯದಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿದ್ದು, ಅದರಲ್ಲೂ ಕಾರುಗಳೇ ಅಪಘಾತಕ್ಕೆ ಈಡಾಗುತ್ತಿರುವುದು ಕೂಡ ಹೆಚ್ಚಾಗಿ ಕಂಡುಬಂದಿದೆ. ಇದೀಗ ಮತ್ತೊಂದು ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-50ರ ಗೊಲ್ಲರಹಳ್ಳಿ ಬಳಿ ಕಾರು ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಜ್ಮಲ್(35) ಸಲ್ಮಾ(30) ಮೃತಪಟ್ಟವರು. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ.
ಪ್ರಯಾಣಿಕರು ರಾಜಸ್ಥಾನದ ಪಾಲ್ಗಡ ಜಿಲ್ಲೆಯವರಾಗಿದ್ದು, ಇಬ್ಬರು ಮಕ್ಕಳು ಸೇರಿ ಏಳು ಮಂದಿ ಕುಟುಂಬ ಸಮೇತರಾಗಿ ಕಾರಿನಲ್ಲಿ ಕೇರಳದಿಂದ ವಾಪಸ್ ರಾಜಸ್ಥಾನಕ್ಕೆ ವಾಪಸ್ಸು ತೆರಳುತ್ತಿರುವಾಗ ಈ ಘಟಕನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.