

ಮೈಸೂರು: ಜಯಪುರ ಹೋಬಳಿಯ ಉದ್ಬೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ಅಲತ್ತೂರು ಗ್ರಾಮದ ಶಿವ(34) ಮತ್ತು ಬೋಗಾದಿ ನಿವಾಸಿ ನಂದನ್(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರಿಬ್ಬರು ಎಚ್.ಡಿ. ಕೋಟೆಯಲ್ಲಿ ಕೆಲಸ ಮುಗಿಸಿಕೊಂಡು ಭಾನುವಾತ ತಡರಾತ್ರಿ ಮೈಸೂರಿಗೆ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಇದನ್ನೂ ಓದಿರಿ ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮರಕ್ಕೆ ಗುದ್ದಿದ ಪರಿಣಾಮ ಶಿವ ಮತ್ತು ನಂದನ್ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಹೊರತೆಗೆದು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.