ಸಾರಿಗೆ ಬಸ್​-ಕಾರಿನ ನಡುವೆ ಭೀಕರ ಅಫಾಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ

accident
Published on

ಬೆಳಗಾವಿ: ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ಸಾರಿಗೆ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿರುವ ಖಾರು ಬಸ್ ಅಡಿ ಸಿಲುಕಿದೆ. ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದ ಸ್ಥಳಕ್ಕೆ ದೌಡಾಯಿಸಿದ ಮುರಗೋಡ ಪೊಲೀಸರು, ಕ್ರೇನ್ ಮೂಲಕ ಕಾರನ್ನು ಹೊರ ತೆಗೆಯಲು ಹರಸಾಹಸಪಟ್ಟರು. ಮೃತಪಟ್ಟವರ ವಿವರ ಇನ್ನೂ ತಿಳಿದು ಬಂದಿಲ್ಲ. ಇದನ್ನೂ ಓದಿರಿ ವಾಟ್ಸ್​ಆ್ಯಪ್​ ವಿಡಿಯೋ ಕಾಲ್​ನಲ್ಲಿ ಬೆತ್ತಲಾದ ಯುವತಿಯರು… ಕಣ್ತುಂಬಿಕೊಂಡವನಿಗೆ ಕಾದಿತ್ತು ಭಾರಿ ಸಂಕಷ್ಟ!

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net