

ಉಪ್ಪಿನಂಗಡಿ: ಕಾರು-ಆಟೋರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಆಟೋರಿಕ್ಷಾದಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಮಂಗಳವಾರ 34 ನೆಕ್ಕಿಲಾಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪೆರ್ನೆ ಕಡೆ ಸಾಗುತ್ತಿದ್ದ ನಝೀರ್ ಜೋಗಿಬೆಟ್ಟು ಎಂಬುವರ ಆಟೋರಿಕ್ಷಾಕ್ಕೆ ಪುತ್ತೂರು ಕಡೆಯಿಂದ ಬಂದ ಕಾರು ಉಪ್ಪಿನಂಗಡಿ ಕಡೆ ಹೋಗಲು ತಿರುವು ಪಡೆದು ರಾಷ್ಟ್ರೀಯ ಹೆದ್ದಾರಿಗೆ ಬಂದಾಗ ಈ ಅಪಘಾತ ಸಂಭವಿಸಿದೆ. ರಿಕ್ಷಾದಲ್ಲಿ ಇಬ್ಬರು ಪ್ರಯಾಣಿಕರಿದ್ದು, ಗಾಯಗೊಂಡು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.