

ಸುಳ್ಯ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಪೆರಾಜೆಯ ಕಲ್ಬರ್ಪೆ ಬಳಿ ಬುಧವಾರ ಸಂಭವಿಸಿದೆ. ಮಂಗಳೂರು ಮೂಲದ ಪ್ರಜ್ವಲ್ ಎಂಬುವರು ಬೈಕ್‌ನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದು, ಎದುರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಮಹಿಳೆಗೆ ಗಾಯಗಳಾಗಿದ್ದು, ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಬೈಕ್ ಸವಾರನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದೆ.