ನಿಂತಿದ್ದ ಬೈಕ್​ಗೆ ಕಾರು ಡಿಕ್ಕಿಯಾಗಿ ಯುವತಿ ಸಾವು

Accident
Published on

ಬಳ್ಳಾರಿ: ನಿಂತಿದ್ದ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ.

ಅಶ್ವಿನಿ (27) ಮೃತ ಯುವತಿ. ನಂದೀಶ್​ (28) ಎಂಬುವರು ಗಾಯಗೊಂಡಿದ್ದಾರೆ.

ನಂದೀಶ್ ಮತ್ತು ಅಶ್ವಿನಿ ಬೈಕ್ ಮೇಲೆ ಕುರುಗೋಡು ಬಸವೇಶ್ವರ ದೇವಸ್ಥಾನಕ್ಕೆ ಹೋಗಿದ್ದರು.ವಾಪಸ್​ ಬರುವ ವೇಳೆ ರಸ್ತೆ ಪಕ್ಕದಲ್ಲೇ ಬೈಕ್​ ನಿಲ್ಲಿಸಲಾಗಿತ್ತು. ಈ ವೇಳೆ ವೇಗವಾಗಿ ಬಂದ ಕಾರು ಬೈಕ್​ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಕುರುಗೋಡು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net