

ಶಿಗ್ಗಾಂವಿ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಭಾನುವಾರ ನಡೆದಿದೆ.
ತಾಲೂಕಿನ ರಾಮಾಪುರದ ರಾಜಾಬಕ್ಷÄ ಚಮನಸಾಬ ಉಪು÷್ಪಣಸಿ (೨೦) ಮೃತ ಬೈಕ್ ಸವಾರ.
ಈತ ಹೊನ್ನಾಪುರದ ಬಳಿಯಿಂದ ರಾಮಾಪುರಕ್ಕೆ ತೆರಳುತ್ತಿದ್ದ ಸಮಯದಲ್ಲಿ ಕಾರು ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಜಾಬಕ್ಷÄನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.