ಕಾರು-ಬೈಕ್ ಡಿಕ್ಕಿ : ಎಸ್‌ಕೆಆರ್‌ಡಿಪಿ ಒಕ್ಕೂಟ ಅಧ್ಯಕ್ಷಗೆ ಗಂಭೀರ ಗಾಯ

accident-15
Published on

ಪುತ್ತೂರು ಗ್ರಾಮಾಂತರ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರು ತಿರುವು ರಸ್ತೆ ಭಾಗದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುತ್ಯಾಳ-ಕಾನ ನಿವಾಸಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ದಿನೇಶ್ ರೈ ಗಾಯಗೊಂಡ ಬೈಕ್ ಸವಾರ. ಎಸ್‌ಐ ಆಗಿರುವ ಮೈಸೂರು ಭಾಗದ ವಸ್ಮಿನ್‌ತಾಜ್ ಎಂಬುವರು ಮಂಗಳೂರಿನಿಂದ ಮೈಸೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಮತ್ತು ದಿನೇಶ್ ರೈ ಈಶ್ವರಮಂಗಲದಿಂದ ಪುತ್ತೂರು ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ದಿನೇಶ್ ಅವರನ್ನು, ವಸ್ಮಿನ್‌ತಾಜ್ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net