ದುಷ್ಕರ್ಮಿಗಳಿಂದ ಕಾರು, ಬೈಕ್ ಜಖಂ

Omni's car glass is broken
ಹೊಸಮನೆಯಲ್ಲಿ ದುಷ್ಕರ್ಮಿಗಳಿಂದ ಓಮ್ನಿ ಜಖಂಗೊಂಡಿದೆ.
Published on

ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯಲ್ಲಿ ಗುರುವಾರ ರಾತ್ರಿ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಗಾಜಗಳನ್ನು ಪುಡಿಪುಡಿ ಮಾಡಿದ್ದಾರೆ.

ಮನೆಯೊಂದಕ್ಕೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಗ್ಯಾಂಗ್ ಲಾಂಗು, ಮಚ್ಚು ಹಿಡಿದು ಭಯದ ವಾತಾವರಣ ಸೃಷ್ಟಿ ಮಾಡಿದ್ದಲ್ಲದೆ, ಮನೆಯೊಂದರ ಮುಂದೆ ನಿಲ್ಲಿಸಿದ್ದ ಓಮ್ನಿ ಕಾರಿನ ಗಾಜು ಒಡೆದಿದ್ದಾರೆ.
ಬೈಕ್ ಒಂದರ ಲೈಟ್ ಒಡೆದು ಹಾಕಿದ್ದಾರೆ. ಬಳಿಕ ಮನೆಯೊಂದಕ್ಕೆ ನುಗ್ಗಿ ಪೀಠೋಪಕರಣಗಳಿಗೆ ಹಾನಿ ಮಾಡಿ ಪರಾರಿಯಾಗಿದ್ದಾರೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net