

ಹಳಿಯಾಳ: ಕಾಳಗಿನಕೊಪ್ಪ, ಗುಂಡೊಳ್ಳಿ ರಸ್ತೆಯಲ್ಲಿ ಬರುವ ಅಜಮನಾಳ ತಾಂಡಾ ಹತ್ತಿರ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಕಾಳಗಿನಕೊಪ್ಪ - ಗುಂಡೊಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ವಾಹನವನ್ನು ನಿಲ್ಲಿಸಿ ಕೆಳಗಿಳಿದಿದ್ದಾನೆ. ಆದರೆ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನೆ ನಡೆದ ತಕ್ಷಣವೇ ಪಟ್ಟಣದ ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ. ಘಟನಾಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.