

ನ್ಯಾಮತಿ: ತಾಲೂಕಿನ ಚಿನ್ನಿಕಟ್ಟೆ ಸಮೀಪದ ಶಿವಮೊಗ್ಗ-ಶಿಕಾರಿಪುರ ರಸ್ತೆಯಲ್ಲಿ ಮಂಗಳವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ ಚರ್ಚ್ ಫಾದರ್ ಮೃತಪಟ್ಟು, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಶಿಕಾರಿಪುರ ಪಟ್ಟಣದ ಶಾಂತಿನಗರ ನಿವಾಸಿ ಫಾದರ್ ಅಂಥೋನಿ ಪೀಟರ್ (51) ಮೃತರು. ಗಂಭೀರ ಗಾಯಗೊಂಡ ಚಾಲಕ ಸ್ಟೀಫನ್ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ನಗರದ ಮಲ್ಲಿಗೇನಹಳ್ಳಿ ರಸ್ತೆಯಲ್ಲಿರುವ ಸನ್ನಿಧಿ ಚರ್ಚ್‌ನಿಂದ ಶಿಕಾರಿಪುರಕ್ಕೆ ವಾಪಸ್ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ.
ಕೆಎಸ್‌ಆರ್‌ಟಿ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಅಪಘಾತಕ್ಕೆ ಕಾರಣವೆಂದು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.