ಶೇಡಿಕೆರೆ ಕ್ರಾಸ್ ಬಳಿ ಕಾರಿಗೆ ಬೆಂಕಿ

YLP CAR
Published on

ಯಲ್ಲಾಪುರ: ಕಾರೊಂದು ಹೆದ್ದಾರಿ ಪಕ್ಕದ ಕಟ್ಟೆಗೆ ಡಿಕ್ಕಿ ಹೊಡೆದು, ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಲೂಕಿನ ಶೇಡಿಕೆರೆ ಕ್ರಾಸ್ ಬಳಿ ನಡೆದಿದೆ.

ಯಲ್ಲಾಪುರದಿಂದ ಕುಮಟಾ ಕಡೆಗೆ ಹೊರಟಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಶೇಡಿಕೆರೆ ಕ್ರಾಸ್ ಬಳಿ ಹೆದ್ದಾರಿ ಪಕ್ಕದ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಶಾರ್ಟ್ ಸಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದವರು ಬಂದು ಬೆಂಕಿ ಆರಿಸಿದ್ದು, ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಹೋಗಿತ್ತು. ಕಾರಿನಲ್ಲಿದ್ದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಪೊಲೀಸರು ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net