ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಕಾರು

1000674046
ಆಕಸ್ಮಿಕ ಬೆಂಕಿಗೆ ಹೊತ್ತಿಉರಿದಿರುವ ಕಾರು.
Published on

ನಾಗಮಂಗಲ: ತಾಲೂಕಿನ ತಿರುಮಲಾಪುರ ಗೇಟ್ ಸಮೀಪ ಶನಿವಾರ ಕುಟುಂಬ ಸಮೇತರಾಗಿ ಪ್ರವಾಸಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಹೊತ್ತಿಉರಿದಿದೆ.

ಬೆಂಗಳೂರಿನ ಯಶವಂತಪುರ ನಿವಾಸಿ ಮೊಹಮದ್ ಹನೀಫ್ ಎಂಬುವವರು, ತಮ್ಮ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ರಾಷ್ಟೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸಂದರ್ಭ ತಾಲೂಕಿನ ತಿರುಮಲಾಪುರ ಗೇಟ್ ಸಮೀಪ ಕಾರಿನಲ್ಲಿ ಸಣ್ಣದಾಗಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ. ನಂತರ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗೆ ಸುಟ್ಟುಹೋಗಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಹೋಗಿ ಬೆಂಕಿ ನಂದಿಸಿದರೂ ಅಷ್ಟರೊಳಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net