ಆಟೋರಿಕ್ಷಾಕ್ಕೆ ಕಾರು ಡಿಕ್ಕಿ

auto
Published on

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾರು ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು ಹಾಗೂ ಉಜಿರೆಯಿಂದ ಮುಂಡಾಜೆ ಕಡೆ ತೆರಳುತ್ತಿದ್ದ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದು ಎರಡು ವಾಹನಗಳು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿವೆ.

ಘಟನೆಯಲ್ಲಿ ರಿಕ್ಷಾ ಚಾಲಕ ದಿಡುಪೆಯ ಸತೀಶ್(39) ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಪಘಾತ ಸ್ಥಳದ ವ್ಯಾಪ್ತಿಯಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಪ್ರದೇಶದಲ್ಲಿ ರಸ್ತೆಯ ಒಂದು ಬದಿಗೆ ಮಾತ್ರ ಡಾಂಬರೀಕರಣ ನಡೆದಿದು,್ದ ಅದು ಅಲ್ಲಲ್ಲಿ ಎದ್ದು ಹೋಗಿ ಹೊಂಡಗಳು ನಿರ್ಮಾಣವಾಗಿವೆ. ಇನ್ನೊಂದು ಬದಿಗೆ ಡಾಂಬರೀಕರಣ ನಡೆಸುವ ತಯಾರಿ ಆಗುತ್ತಿದ್ದು ಆ ಬದಿಯ ರಸ್ತೆಯಲ್ಲಿ ವಾಹನ ಸಂಚಾರ ಇರುವುದಿಲ್ಲ. ಈ ಕಾರಣದಿಂದ ರಸ್ತೆಯು ತೀರಾ ಅಗಲ ಕಿರಿದಾಗಿದ್ದು ಆಗಾಗ ಅಪಘಾತ ಸಂಭವಿಸುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net