

ಸೋಮವಾರಪೇಟೆ: ಇಲ್ಲಿನ ನ್ಯಾಯಾಲಯದ ಸಮೀಪ ಶನಿವಾರ ಲಾರಿ ಕಾರುನಡುವೆ ಅಪಘಾತ ಸಂಭವಿಸಿದ್ದು, ಸವಾರರು ಅಪಾಯದಿಂದ ಪಾರಾಗಿದ್ದಾರೆ.
ಪಿರಿಯಾಪಟ್ಟಣದ ನಿವಾಸಿ ಪ್ರತೀಶ್ ಅವರು ಕಾರಿನಲ್ಲಿ ತಮ್ಮ ಸ್ನೇಹಿತರೊಂದಿಗೆ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸಂದರ್ಭ ಇಲ್ಲಿನ ನ್ಯಾಯಾಲಯದ ಮುಂಭಾಗ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.