

ಬ್ಯಾಡಗಿ: ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಶಿಡೇನೂರ ಬಳಿ ಭಾನುವಾರ ನಡೆದಿದೆ.
ಗ್ರಾಮದ ಪರಮೇಶಪ್ಪ ಕುರುವತ್ತೆಪ್ಪ ಅಂಗಡಿ ಮೃತ ಬೈಕ್ ಸವಾರ.
ಇವರು ಬೈಕ್ ಮೇಲೆ ಶಿಡೇನೂರ ಬಳಿ ತೆರಳುತ್ತಿದ್ದ ಸಮಯದಲ್ಲಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ರಾಣೆಬೆನ್ನೂರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.