ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

Crime Logo
Published on

ಸವಣೂರ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಬೇವಿನಹಳ್ಳಿಯಲ್ಲಿ ಭಾನುವಾರ ನಡೆದಿದೆ.

ಮಲ್ಲಪ್ಪ ಸುಭಾಷಚಂದ್ರ ಕೋಟಿ ಮೃತ ವ್ಯಕ್ತಿ.

ಇವರು ಬೇವಿನಹಳ್ಳಿ-ಸವಣೂರ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಯಾವುದೋ ಕಾರು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಮಲ್ಲಪ್ಪ ಅವರನ್ನು ಸವಣೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್​ಗೆ ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net