ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Crime Logo
Published on

ಶಿಗ್ಗಾಂವಿ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಪಟ್ಟಣದ ಪ್ರವಾಸಿ ಮಂದಿರದ ಕ್ರಾಸ್‌ನಲ್ಲಿ ಗುರುವಾರ ನಡೆದಿದೆ.
ತಾಲೂಕಿನ ಬಸವನಾಳದ ಹೆಗ್ಗಪ್ಪ ನಿಂಗಪ್ಪ ಮಾದರ (58) ಮೃತ ವ್ಯಕ್ತಿ.
ಇವರು ಪ್ರವಾಸಿ ಮಂದಿರದ ಮುಂದಿನ ಎನ್‌ಎಚ್-48ರ ರಸ್ತೆ ದಾಟುತ್ತಿದ್ದ ಸಮಯದಲ್ಲಿ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net