ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಬೆಂಕಿಗಾಹುತಿ: ದಂಪತಿ ಪ್ರಾಣಾಪಾಯ ಪಾರು

Car Fire 6 dec 19
Published on

ಮೈಸೂರು: ದಟ್ಟಗಳ್ಳಿ ಸಾ.ರಾ.ಕಲ್ಯಾಣ ಮಂಟಪದ ಎದುರು ಭಾನುವಾರ ಬೆಳಗ್ಗೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಕುವೆಂಪುನಗರದ ಚಂದ್ರು ಮತ್ತು ಪತ್ನಿ ನೇಹಾ ದಂಪತಿ ಕಾರಿನಲ್ಲಿ ದಟ್ಟಗಳ್ಳಿ ಕಡೆ ತೆರಳುತ್ತಿದ್ದಾಗ ಏಕಾಏಕಿ ಟಯರ್ ಸ್ಫೋಟಗೊಂಡಿತು. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತು.

ಗಾಯಗೊಂಡ ದಂಪತಿಯನ್ನು ಸ್ಥಳೀಯರು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಇತ್ತ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಯಿತು.


ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಘಟನಾ ಸ್ಥಳಕ್ಕೆ ಡಿಸಿಪಿ ಜಾಹ್ನವಿ, ಎಸಿಪಿ ಪರುಶುರಾಮಪ್ಪ ಭೇಟಿ ನೀಡಿ ಪರಿಶೀಲಿಸಿದರು. ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net