

ಮೈಸೂರು; ಮೈಸೂರು ತಾಲೂಕಿನ ಚಿಕ್ಕಳ್ಳಿ ಗ್ರಾಮದ ಬಳಿ ತಿ.ನರಸೀಪುರ ರಸ್ತೆಯಲ್ಲಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟಿದ್ದಾರೆ.
ಮದ್ದೂರು ಮೂಲದ ಮೈಸೂರು ನಿವಾಸಿ ಬಿಳಿಗೌಡ(51) ಮೃತರು. ತಲಕಾಡಿನಲ್ಲಿರುವ ತಮ್ಮ ತೋಟಕ್ಕೆ ತೆರಳಲು ಕಾರಿನಲ್ಲಿ ಹೋಗುತ್ತಿದ್ದರು.
ಈ ಸಂದರ್ಭದಲ್ಲಿ ಎದುರಿಗೆ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.