ವಿದ್ಯುತ್​ ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ಒಬ್ಬ ಸ್ಥಳದಲ್ಲೇ ಸಾವು..

Car Accident 1
Published on

ಉತ್ತರ ಕನ್ನಡ: ಕಾರೊಂದು ವಿದ್ಯುತ್ ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಉರಿದಿದ್ದು, ಒಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಗ್ರಾಮದ ಹಾರವಾಡ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿ ಹೊಡೆದ ತೀವ್ರತೆಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಪರಿಣಾಮವಾಗಿ ಆಂಧ್ರಪ್ರದೇಶ ಮೂಲದ ರವಿತೇಜ (25) ಎಂಬವರು ಸಾವಿಗೀಡಾಗಿದ್ದಾರೆ.

ಕಾರು ಮುರುಡೇಶ್ವರದಿಂದ ಗೋವಾ ಕಡೆಗೆ ತೆರಳುತ್ತಿದ್ದು, ಅದರಲ್ಲಿದ್ದ ಇನ್ನು ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಅತಿ ವೇಗದ ಚಾಲನೆಯಿಂದ ಅಪಘಾತ ಆಗಿದೆ ಎನ್ನಲಾಗಿದೆ. ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net