ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು!

Car
Published on

ಕೋಲಾರ: ಭೀಕರ ಅಪಘಾತವೊಂದರಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಇಂಥದ್ದೊಂದು ಭೀಕರ ಅಪಘಾತ ಸಂಭವಿಸಿದೆ.

ಕೋಲಾರ ತಾಲೂಕಿನ ಶಾಪೂರು ಕ್ರಾಸ್ ಬಳಿ ಇಂದು ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ವಿಮಲ್​ (27) ಮತ್ತು ಶರೀನಾ (22) ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಹರ್ಷಿತ, ಡೇವಿಡ್, ವಿಮೋನಿಯಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇವರೆಲ್ಲರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತರು. ಚೆನ್ನೈನಿಂದ ಬಾಡಿಗೆ ಕಾರು ಮಾಡಿಕೊಂಡು ಬೆಂಗಳೂರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದರೂ ಉಳಿಸಿಕೊಳ್ಳಲು ಆಗಲಿಲ್ಲ. ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net