ಕಾರಿಗೆ ಡಿಕ್ಕಿಯೊಡೆದ ಕಾರು ಯುವಕ ಸಾವು

accident-15
Published on

ಚನ್ನಪಟ್ಟಣ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಯುವಕರು ಗಾಯಗೊಂಡಿರುವ ಘಟನೆ ತಾಲೂಕಿನ ಕನ್ನಿದೊಡ್ಡಿ ಗೇಟ್ ಸಮೀಪ ಭಾನುವಾರ ನಡೆದಿದೆ.

ಬೆಂಗಳೂರಿನ ಹೆಬ್ಬಾಳ ಮೂಲದ ಮೋಹನ್ (೨೧) ಮೃತ ದುರ್ದೈವಿ. ಬೆಂಗಳೂರಿನಿಂದ‌ ಪ್ರವಾಸಕ್ಕೆಂದು ಇವರುಗಳು ಶನಿವಾರ ಹೊರಟ್ಟಿದ್ದರು. ಭಾನುವಾರ ಕಬ್ಬಾಳು ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸು ಮನೆಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾದ ಹಿನ್ನೆಲೆಯಲ್ಲಿ ಮೋಹನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿಣ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲದಿನಗಳ ಹಿಂದೆ ಇದೇ ರೀತಿಯಾದ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿದ್ದನ್ನು ಸ್ಮರಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net