ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕನ ವಿರುದ್ಧ ದೂರು

tunga-nagar-police-station
ಶಿವಮೊಗ್ಗ ತುಂಗಾನಗರ ಠಾಣೆ
Published on

ಶಿವಮೊಗ್ಗ: ಗಾಜನೂರು ಸಮೀಪ ಕಾರು ಡಿಕ್ಕಿಯಾಗಿ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್ ಇಂಜಿನಿಯರ್ ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ.

ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಭಾಗ ಟಯೊಟಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡದಿತ್ತು. ಇದರಿಂದ ಕಂಬ ಜಖಂಗೊಂಡಿದ್ದು ಹಾಗಾಗಿ 23,778 ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್ ಇಂಜಿನಿಯರ್ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net