ಅಪಘಾತದಲ್ಲಿ ಕಾರು ಜಖಂ

31blrp5
Published on

ಬೇಲೂರು: ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಕ್ಕೋಡು ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಹಾಗೂ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದ್ದು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ಎರಡು ಬೈಕ್ ಹಾಗೂ ಟಾಟಾ ಪಿಕಪ್ ವಾಹನಕ್ಕೆ ಗುದ್ದಿದೆ. ನಂತರ ಮರಕ್ಕೆ ಗುದ್ದಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net