

ಮೈಸೂರು: ಉತ್ತಮ ಪ್ರದರ್ಶನ ನೀಡಿದ ಸಿಎಆರ್ ಕಿಂಗ್ಸ್ ಇಲೆವೆನ್ ತಂಡ ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್‌ನಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿತು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಫೈರಿಂಗ್ ರೇಂಜ್ ಮೈದಾನದಲ್ಲಿ ಭಾನುವಾರ ಫೈನಲ್ ಪಂದ್ಯದಲ್ಲಿ ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಫೀನಿಕ್ಸ್ ತಂಡದ ವಿರುದ್ಧ ಜಯ ಸಾಧಿಸಿತು.
ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಫೀನಿಕ್ಸ್ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿತು. ಮೂರು ತಿಂಗಳಿಂದ ಜರುಗಿದ್ದ ಪಂದ್ಯಾವಳಿಯಲ್ಲಿ 12 ತಂಡಗಳು ಭಾಗವಹಿಸಿದ್ದವು. ಲೀಗ್ ಮತ್ತು ನಾಕೌಟ್ ಸೇರಿದಂತೆ ಒಟ್ಟು 136 ಪಂದ್ಯಗಳು ನಡೆದಿದ್ದವು.
ಕರ್ತವ್ಯದ ಒತ್ತಡಗಳ ನಡುವೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಭಾಗವಹಿಸಿ ಕ್ರೀಡಾ ಮನೋಭಾವ ಪ್ರದರ್ಶಿಸಿದ್ದರು.