ಲಾರಿ-ಕಾರು ಡಿಕ್ಕಿಇಬ್ಬರು ದುರ್ಮರಣ

Car_Accident
Published on

ತುಮಕೂರು: ಲಾರಿ ಹಾಗು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ ಹಿನ್ನೆಲೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ.

ದಾವಣೆಗೆರೆ ಮೂಲದ ಶಿವು ನಾಯಕ್( 32), ಕೊಡಿಗೇನಹಳ್ಳಿಯ ಪರಮೇಶ್ ಮೃತ ದುರ್ದೈವಿಗಳು. ಡಾಬಸ್‌ಪೇಟೆಯಲ್ಲಿ ಮದುವೆ ಮುಗಿಸಿ ತುಮಕೂರು ಮೂಲಕ ಮಧುಗಿರಿಯ ಕೊಡಿಗೇನಹಳ್ಳಿ ಕಡೆಗೆ ಎರ್ಟಿಗಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಂಧ್ರ ಕಡೆಯಿಂದ ತುಮಕೂರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಐವರು ಗಾಯಗೊಂಡರು.

ಗಾಯಳುಗಳನ್ನ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net