

ನಾಪೋಕ್ಲು: ಸಮೀಪದ ಬಲ್ಲಮಾವಟಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಬಲ್ಲಮಾವಟಿ ಗ್ರಾಮದ ನಿವಾಸಿ ಎಡಿಕೇರಿ ಗಣಪತಿ ತಮ್ಮ ಕಾರಲ್ಲಿ ನಾಪೋಕ್ಲುವಿನಿಂದ ಬಲ್ಲಮಾವಟಿಗೆ ತೆರಳುತ್ತಿದ್ದ ವೇಳೆ ನಾಪೋಕ್ಲು - ಭಾಗಮಂಡಲ ಮುಖ್ಯರಸ್ತೆಯ ಬಲ್ಲಮಾವಟಿ ಡಬ್ಬಲ್ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಸಂಪೂರ್ಣ ಜಖಂಗೊಂಡಿದೆ. ಗಣಪತಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಇವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ ಹಾಗೂ ಸಿಬ್ಬಂದಿ ಸ್ಥಳಕ್ಕೆ ತರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.