ಕಾರ್ ಪಲ್ಟಿಯಾಗಿ ಓರ್ವ ಸಾವು, ಇಬ್ಬರಿಗೆ ಗಾಯ

25KOKATANUR1-Web
ಐಗಳಿ ಕ್ರಾಸ್ ಬಳಿ ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಚಾಲಕ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರ್.
Published on

ಕೊಕಟನೂರ: ಅಥಣಿ ತಾಲೂಕಿನ ಐಗಳಿ ಕ್ರಾಸ್ ಬಳಿಯ ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.

ಕಟಗೇರಿ ಗ್ರಾಮದ ಹನುಮಂತ ಲಕ್ಕಪ್ಪ ಸಾರವಾಡ (34) ಮೃತಪಟ್ಟ ವ್ಯಕ್ತಿ. ಅದೇ ಗ್ರಾಮದ ರಾಮು ಮಾಮನಗೋಳ ಹಾಗೂ ಗಿರಿಮಲ್ಲ ಸದಾಶಿವ ಪದಮಣ್ಣವರ ಗಾಯಗೊಂಡವರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಿಂದ ಐಗಳಿ ಕ್ರಾಸ್ ಮಾರ್ಗವಾಗಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಐಗಳಿ ಪಿಎಸ್‌ಐ ಕೆ.ಎಸ್. ಕೋಚರಿ, ತನಿಖಾ ಸಹಾಯಕ ಎಂ.ಎಸ್. ಮೇತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net