ಬೆಂಕಿ ಹೊತ್ತಿ ಉರಿದ ಕಾರು

Car on fire
ಇಳಕಲ್ಲನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕಾರು ಬೆಂಕಿ ಹೊತ್ತಿ ಉರಿಯುತ್ತಿರುವುದು.
Published on

ಇಳಕಲ್ಲ(ಗ್ರಾ): ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ಕಾರಿಗೆ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ.

ರೋಗಿಯನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ ಚಾಲಕ, ಮರಳಿ ಕಾರನ್ನು ಚಾಲು ಮಾಡಲು ಹೋದಾಗ ಈ ಘಟನೆ ನಡೆದಿದೆ. ಬೆಂಕಿ ಹತ್ತಿಕೊಂಡ ಕೂಡಲೇ ಚಾಲಕ ಕಾರಿಂದ ಕೆಳಗೆ ಇಳಿದಿದ್ದಾನೆ. ಬೆಂಕಿ ನಂದಿಸಲು ಆಸ್ಪತ್ರೆ ಸಿಬ್ಬಂದಿ ಹರಸಾಹಸಪಟ್ಟರು. ಶಹರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net