ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ನಗರದ ಎಪಿಎಂಸಿ ಕಚೇರಿ ಎದುರ ಅವಘಡ

Car on Fire Mandya
Published on

ಮಂಡ್ಯ: ನಗರದ ಎಪಿಸಿಎಂ ಕಚೇರಿ ಸಮೀಪ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಕಾರು ಹೊತ್ತಿ ಉರಿದು ಸಂಪೂರ್ಣ ಹಾಳಾಗಿದೆ.

ಮದನ್ ಎಂಬುವವರು ಬೆಂಗಳೂರಿನ ಕೆಂಗೇರಿಯಿಂದ ಕುಶಾಲನಗರ ಕಡೆ ಹೋಗುತ್ತಿದ್ದರು. ನಗರದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಸುಟ್ಟ ವಾಸನೆ ಬಂದಿದೆ. ತಕ್ಷಣ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ ಒಳಗಿದ್ದವರು ಕೆಳಗೆ ಇಳಿದಿದ್ದಾರೆ. ಬಳಿಕ ಕ್ಷಣಾರ್ಧದಲ್ಲಿಯೇ ದಟ್ಟ ಹೊಗೆ ಕಾಣಿಸಿಕೊಂಡು, ನೋಡು ನೋಡುತ್ತಿದ್ದಂತೆ ಕಾರು ಧಗಧಗನೆ ಹೊತ್ತಿ ಉರಿದಿದೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ದೌಡಾಯಿಸಿ, ಅಗ್ನಿ ನಂದಿಸಿದರಾದರೂ ಕಾರು ಸಂಪೂರ್ಣ ಭಸ್ಮವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net