

ಹೊನ್ನಾವರ: ತಾಲೂಕಿನ ಹಡಿನಬಾಳ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಪಲ್ಟಿಯಾಗಿ ಸೇತುವೆ ಕೆಳಗೆ ಬಿದ್ದ ಪರಿಣಾಮ ಒಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಶಿವಮೊಗ್ಗದಿಂದ ಹೊನ್ನಾವರ ಮಾರ್ಗವಾಗಿ ಗೋವಾಗೆ ಚಲಿಸುತ್ತಿದ್ದ ಕಾರು ಹಡಿನಬಾಳ ಸೇತುವೆ ಎಡಭಾಗದಲ್ಲಿಂದ ರಸ್ತೆ ಬಿಟ್ಟು ಸೇತುವೆ ಅಡಿಯಲ್ಲಿರುವ ರಸ್ತೆಗೆ ಬಿದ್ದಿದೆ. ಚಾಲಕ ಸೇರಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರಾಹುಲ್ (32) ಎಂಬಾತ ಮೃತಪಟ್ಟಿದ್ದಾನೆ. ಒಬ್ಬ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಉಳಿದ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.